Matthew 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
Kannada BSI Bible 2016
ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು
Kannada Bible (KNCL) BSI 2016
ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.