Matthew 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಸೇವಕನು ರಾಜನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆ ತಂದುಕೊಳ್ಳಿ. ನಾನು ನಿಮಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ.’ ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
Kannada BSI Bible 2016
ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕನು ಅವನ ಕಾಲಿಗೆ ಬಿದ್ದು ಅವನಿಗೆ - ಒಡೆಯನೇ, ಸ್ವಲ್ಪ ತಾಳಿಕೋ, ನಿನ್ನದೆಲ್ಲಾ ನಾನು ಕೊಟ್ಟು ತೀರಿಸುತ್ತೇನೆಂದು ನಮಸ್ಕರಿಸಲಾಗಿ
Kannada Bible (KNCL) BSI 2016
ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.