Matthew 18:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
Kannada BSI Bible 2016
ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.
Kannada Bible (KNCL) BSI 2016
“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.