Matthew 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
Kannada BSI Bible 2016
ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು.
Kannada Bible (KNCL) BSI 2016
ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.