Matthew 18:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
Kannada BSI Bible 2016
ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೇ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದರು.
Kannada Bible (KNCL) BSI 2016
ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.