Matthew 18:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
Kannada BSI Bible 2016
ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ಒಡೆಯನು ಅವನನ್ನು ಕರಸಿ - ಎಲಾ ನೀಚನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ಆ ಸಾಲವನ್ನೆಲ್ಲಾ ನಾನು ಬಿಟ್ಟುಬಿಟ್ಟೆನಲ್ಲಾ;
Kannada Bible (KNCL) BSI 2016
ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.