Matthew 18:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಕೋಪಗೊಂಡು ಅವನನ್ನು ಶಿಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸಿದನು. ಆ ಸೇವಕನು ತನ್ನ ಸಾಲವನ್ನೆಲ್ಲಾ ತೀರಿಸುವ ತನಕ ಸೆರೆಮನೆಯಲ್ಲಿ ಇರಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
Kannada BSI Bible 2016
ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಪೀಡಿಸುವವರ ಕೈಗೆ ಒಪ್ಪಿಸಿದನು.
Kannada Bible (KNCL) BSI 2016
ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.