Matthew 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
Kannada BSI Bible 2016
ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.
Kannada Bible (KNCL) BSI 2016
ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.