Matthew 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
Kannada BSI Bible 2016
ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.
Kannada Bible (KNCL) BSI 2016
“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.