Matthew 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Kannada BSI Bible 2016
ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!
Kannada Bible (KNCL) BSI 2016
ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!