Matthew 18:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
Kannada BSI Bible 2016
ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನಿನ್ನ ಕೈಯಾಗಲಿ ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ಎರಡು ಕೈ ಎರಡು ಕಾಲು ಉಳ್ಳವನಾಗಿದ್ದು ನಿತ್ಯವಾಗಿರುವ ಬೆಂಕಿಯಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕೈ ಕಾಲು ಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.
Kannada Bible (KNCL) BSI 2016
ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.