Matthew 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕಣ್ಣು ನಿನ್ನನ್ನು ಪಾಪಕ್ಕೆ ನಡೆಸಿದರೆ, ಅದನ್ನು ಕಿತ್ತು ಎಸೆದುಬಿಡು. ಎರಡು ಕಣ್ಣುಳ್ಳವನಾಗಿದ್ದು ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
Kannada BSI Bible 2016
ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ಎರಡು ಕಣ್ಣುಳ್ಳವನಾಗಿದ್ದು ಅಗ್ನಿ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ಜೀವದಲ್ಲಿ ಸೇರುವದು ನಿನಗೆ ಉತ್ತಮ.
Kannada Bible (KNCL) BSI 2016
ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.