Matthew 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
Kannada BSI Bible 2016
ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆ ಪ್ರಯಾಣಮಾಡಿ ಯೂದಾಯ ಪ್ರಾಂತ್ಯಕ್ಕೆ ಬಂದನು.
Kannada Bible (KNCL) BSI 2016
ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು.