Matthew 19:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
Kannada BSI Bible 2016
ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ಈ ಮಾತನ್ನು ಅಂಗೀಕರಿಸುವ ವರವನ್ನು ಹೊಂದಿದವರೇ ಹೊರತು ಮತ್ತಾರೂ ಅದನ್ನು ಅಂಗೀಕರಿಸುವದಿಲ್ಲ.
Kannada Bible (KNCL) BSI 2016
ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.