Matthew 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
Kannada BSI Bible 2016
ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.
Kannada Bible (KNCL) BSI 2016
ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.