Matthew 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
Kannada BSI Bible 2016
ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.
Kannada Bible (KNCL) BSI 2016
ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.