Matthew 19:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
Kannada BSI Bible 2016
ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ - ಒಳ್ಳೇದನ್ನು ಕುರಿತು ನನ್ನನ್ನು ಯಾಕೆ ಕೇಳುತ್ತೀ? ಒಳ್ಳೆಯವನು ಒಬ್ಬನೇ. ಆದರೆ ಆ ಜೀವದಲ್ಲಿ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ಸರಿಯಾಗಿ ನಡೆದುಕೋ ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.

Recommended Reading