Matthew 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada BSI Bible 2016
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.