Matthew 19:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
Kannada BSI Bible 2016
ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
Kannada Bible (KNCL) BSI 2016
ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.