Matthew 19:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.
Kannada BSI Bible 2016
ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು - ಹೀಗಿದ್ದರೆ ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು
Kannada Bible (KNCL) BSI 2016
ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.