Matthew 19:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
Kannada BSI Bible 2016
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.
Kannada Bible (KNCL) BSI 2016
ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.