Matthew 19:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
Kannada BSI Bible 2016
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ
Kannada Bible (KNCL) BSI 2016
ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.