Matthew 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
Kannada BSI Bible 2016
ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು
Kannada Bible (KNCL) BSI 2016
\ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.