Matthew 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
Kannada BSI Bible 2016
ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಮೋಶೆಯು ನಿಮ್ಮ ಮೊಂಡತನವನ್ನು ನೋಡಿ ನಿಮ್ಮ ಹೆಂಡರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು; ಆದರೆ ಆದಿಯಿಂದಲೇ ಹಾಗೆ ಇರಲಿಲ್ಲ.
Kannada Bible (KNCL) BSI 2016
“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.