Matthew 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
Kannada BSI Bible 2016
ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗುತ್ತಾನೆಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.