Matthew 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
Kannada BSI Bible 2016
ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
Kannada Bible (KNCL) BSI 2016
ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.