Matthew 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
Kannada BSI Bible 2016
ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
Kannada Bible (KNCL) BSI 2016
ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.