Matthew 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
Kannada BSI Bible 2016
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.
Kannada Bible (KNCL) BSI 2016
ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.