Matthew 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.
Kannada BSI Bible 2016
ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತುಹೋದರು ಎಂದು ಹೇಳಿದನು.
Kannada Bible (KNCL) BSI 2016
“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.