Matthew 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
Kannada BSI Bible 2016
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
Kannada Bible (KNCL) BSI 2016
ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.