Matthew 2:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
Kannada BSI Bible 2016
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.
Kannada Bible (KNCL) BSI 2016
ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.