Matthew 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
Kannada BSI Bible 2016
ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.
Kannada Bible (KNCL) BSI 2016
ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.