Matthew 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
Kannada BSI Bible 2016
ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.
Kannada Bible (KNCL) BSI 2016
‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’ ” ಎಂದು ಹೇಳಿದರು.