Matthew 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
Kannada BSI Bible 2016
ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -
Kannada Bible (KNCL) BSI 2016
ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.