Matthew 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
Kannada BSI Bible 2016
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನೂ ಬಂದು ಅದಕ್ಕೆ ಅಡ್ಡಬೀಳಬೇಕು ಎಂದು ಹೇಳಿ ಅವರನ್ನು ಬೇತ್ಲೆಹೇವಿುಗೆ ಕಳುಹಿಸಿದನು.
Kannada Bible (KNCL) BSI 2016
ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.