Matthew 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
Kannada BSI Bible 2016
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಮೂಡಣದೇಶದಲ್ಲಿ ಕಂಡ ನಕ್ಷತ್ರವು ಅವರ ಮುಂದೆ ಮುಂದೆ ನಡೆದು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಂತಿತು.
Kannada Bible (KNCL) BSI 2016
ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು.