Matthew 20:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
Kannada BSI Bible 2016
ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಮೊದಲಿನವರು ಬಂದು ತಮಗೆ ಹೆಚ್ಚು ದೊರೆಯುವದೆಂದು ನೆನಸಿದರು; ಆದರೆ ಇವರಿಗೆ ಸಹ ಒಂದೊಂದು ಪಾವಲಿಯೇ ಸಿಕ್ಕಿತು.
Kannada Bible (KNCL) BSI 2016
ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು.