Matthew 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
Kannada BSI Bible 2016
ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.
Kannada Bible (KNCL) BSI 2016
‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.