Matthew 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
Kannada BSI Bible 2016
ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;
Kannada Bible (KNCL) BSI 2016
ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?

Recommended Reading