Matthew 20:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
Kannada BSI Bible 2016
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.
Kannada Bible (KNCL) BSI 2016
ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.