Matthew 20:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.
Kannada Bible (KNCL) BSI 2016
ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.