Matthew 20:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
Kannada BSI Bible 2016
ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.
Kannada Bible (KNCL) BSI 2016
“ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು.