Matthew 20:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
Kannada BSI Bible 2016
ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.