Matthew 20:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Kannada BSI Bible 2016
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,\ ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.