Matthew 20:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
Kannada BSI Bible 2016
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
Kannada Bible (KNCL) BSI 2016
ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ.