Matthew 20:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ಜೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಬಹಳ ಜನರು ಯೇಸುವನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
Kannada BSI Bible 2016
ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನ ಹಿಂದೆ ಹೋಯಿತು.
Kannada Bible (KNCL) BSI 2016
ಅವರೆಲ್ಲರೂ ಜೆರಿಕೊ ಪಟ್ಟಣವನ್ನು ಬಿಟ್ಟು ಹೊರಟರು. ಜನರ ದೊಡ್ಡ ಗುಂಪು ಯೇಸುಸ್ವಾಮಿಯನ್ನು ಹಿಂಬಾಲಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತು ಅವರ ಶಿಷ್ಯರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ, ಜನರು ದೊಡ್ಡ ಸಮೂಹವಾಗಿ ಯೇಸುವನ್ನು ಹಿಂಬಾಲಿಸಿದರು.