Matthew 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
Kannada BSI Bible 2016
ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -
Kannada Bible (KNCL) BSI 2016
ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,