Matthew 20:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
Kannada BSI Bible 2016
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು, ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು.
Kannada Bible (KNCL) BSI 2016
ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು.