Matthew 20:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
Kannada BSI Bible 2016
ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
Kannada Bible (KNCL) BSI 2016
ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.