Matthew 20:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
Kannada BSI Bible 2016
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೆ ಅವರಿಗೆ ಕಣ್ಣು ಬಂದವು, ಅವರು ಆತನ ಹಿಂದೆ ಹೋದರು.
Kannada Bible (KNCL) BSI 2016
ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.